ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ಖುದ್ದು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಇಂದು ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ರಾಜ್ಯದಲ್ಲಿ ಮೇ 31ರ ಮಾಹಿತಿಯಂತೆ 1.26 ಲಕ್ಷ ಮೆಟ್ರಿಕ್ ಟನ್ ಡಿಎಪಿ ಲಭ್ಯವಿದ್ದು, ಒಟ್ಟಾರೆ, 7.64 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ. ರಾಜ್ಯದ ಬೇಡಿಕೆ ಪೂರೈಸಲು ಯಾವುದೇ ಕೊರತೆ ಇಲ್ಲ. ಆದರೆ, ವ್ಯವಸ್ಥಿತವಾಗಿ ಅಗತ್ಯ ಆಧರಿಸಿ ರಸಗೊಬ್ಬರ ಸಕಾಲದಲ್ಲಿ ಪೂರೈಸಲು ಹಿರಿಯ ಅಧಿಕಾರಿಗಳೇ ಮೇಲ್ವಿಚಾರಣೆ ನಡೆಸಿ, ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

