ಬೆಂಗಳೂರು: ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಸೂಳಗಿರಿ ಮೇಳುಮಲೈ ಬಳಿ ನಡೆದಿದೆ. 29 ವರ್ಷದ ವರ್ಷದ ರಾಜು ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ರಾಜು ಬೆಂಗಳೂರಿನಲ್ಲಿ ದ್ವಿಚಕ್ರವಾಹನದ ಮೆಕ್ಯಾನಿಕ್ ವಿಭಾಗದಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವಾಗ ಬೈಕ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಕುರುಬರಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

bigtvnews | Hubli Dharwad News | Kannada News | Karnataka News Hubli News | News In Hubli | Local news