Breaking News

ರಾಜ್ಯದ ಕಂತು 2000 ರೂ. ಗಳನ್ನು ಬಿಡುಗಡೆ ಮಾಡಿದ ಸಿಎಂ


ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು 2000 ರೂ. ಗಳನ್ನು ಬಿಡುಗಡೆ ಮಾಡಿದರು.ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು.

ಇಲ್ಲಿಯವರೆಗೆ ರಾಜ್ಯ ಸರ್ಕಾರವು ಒಟ್ಟು 3861.66 ಕೋಟಿ ರೂ. ನೆರವನ್ನು ರೈತರಿಗೆ ಬಿಡುಗಡೆ ಮಾಡಿದೆ.
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2019ರಿಂದ ಮಾರ್ಚ್‍ ವರೆಗೆ 53.83 ಲಕ್ಷ ರೈತರಿಗೆ 8702.29 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಮೇ 31 ರಂದು ಮಾನ್ಯ ಪ್ರಧಾನ ಮಂತ್ರಿಗಳು ರಾಜ್ಯದ 49.30 ಲಕ್ಷ ರೈತರಿಗೆ 1279.86 ಕೋಟಿ ರೂ. ಬಿಡುಗಡೆ ಮಾಡಿದರು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *