Breaking News

ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ : 3 ಜನ ಸಾವು


ಸಿರವಾರ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ತಾಲೂಕಿನ ತಿಪ್ಪಲದಿನ್ನಿ ಕ್ರಾಸ್ ಬಳಿ ಜರುಗಿದೆ.

ರಾಯಚೂರಿಗೆ ತೆರಳುತ್ತಿದ್ದ ಒಂದು ಬೈಕ್ ಹಾಗೂ ರಾಯಚೂರಿನಿಂದ ಹಟ್ಟಿಗೆ ತೆರಳುತ್ತಿದ್ದ ಮತ್ತೊಂದು ಬೈಕ್ ನಡುವೆ ಢಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಇನ್ನೋರ್ವ ಹುಡುಗನಿಗೆ ಗಂಭೀರ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಮೃತರನ್ನು ವಿರುಪಾಕ್ಷಿ, ಅಕ್ಕಮಹಾದೇವಿ, ವೆಂಕೋಬಾ ಸಾಗರ್ ಎಂದು ಗುರುತಿಸಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *