Breaking News

ಪಿಎಸ್‌ಐ ನೇಮಕಾತಿ ಅಕ್ರಮ : ದರ್ಶನ್ ಗೌಡ ಬಂಧನ..

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಗೌಡ ರಾಮನಗರ ಜಿಲ್ಲೆಯ ಮಾಗಡಿ ಮೂಲದ ನಿವಾಸಿ. ದರ್ಶನ್ ಗೌಡ ಪ್ರಕರಣದಲ್ಲಿ ಸಚಿವ ಅಶ್ವತ್ಥನಾರಾಯಣ ಹೆಸರು ಬಾಯ್ಬಿಟ್ಟಿದ್ದ ಎಂದು ಹೇಳಲಾಗಿತ್ತು. ನಿನ್ನೆ ವಿಚಾರಣೆಗಾಗಿ ಸಿಐಡಿ ಪೊಲೀಸರು ದರ್ಶನ್ ಗೌಡನನ್ನು ವಶಕ್ಕೆ ಪಡೆದಿದ್ದರು. ಇದೀಗ ಆತನನ್ನು ಬಂಧಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ದರ್ಶನ್ ಗೌಡ ಓಎಂಆರ್ ಶೀಟ್ ಖಾಲಿ ಬಿಟ್ಟಿದ್ದ. ಪರೀಕ್ಷೆ ಬಳಿಕ ಅದನ್ನು ತುಂಬಲಾಗಿರುವುದು ಎಫ್ ಎಸ್ ಎಲ್ ವರದಿಯಲ್ಲಿ ದೃಢಪಟ್ಟಿದೆ. ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದರ್ಶನ್ ಗೌಡ ವಿರುದ್ಧ ಸಾಕ್ಷಿ ಸಮೇತ ದೂರು ಕೂಡ ದಾಖಲಾಗಿತ್ತು. ಇದೀಗ ಸಿಐಡಿ ಪೊಲೀಸರು ದರ್ಶನ್ ಗೌಡನನ್ನು ಬಂಧಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *