Breaking News

ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಅಬ್ಬರ ಶುರು.


ಬೆಂಗಳೂರು: ಕಳೆದೊಂದು ವಾರದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರ ಗಡಿ ದಾಟಿದೆ.

ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಾಲ್ಕನೇ ಭೀತಿ ಎದುರಾಗಿದೆ. ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ 1,927 ಸೋಂಕು ಪ್ರಕರಣಗಳು ವರದಿಯಾಗಿದ್ದು, ದಿನದ ಸೋಂಕು ಪ್ರಮಾಣ ದರ ಶೇ. 1ಕ್ಕಿಂತ ಹೆಚ್ಚಿದೆ. ಈ ಅವಧಿಯಲ್ಲಿ 1443 ಸೋಂಕಿತರು ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕೊರೊನಾ ನಾಲ್ಕನೇ ಭೀತಿ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ತಜ್ಞರು ಎಚ್ಚರಿಕೆ ನೀಡಿದ್ದು, ಕೋವಿಡ್ ಲಸಿಕೆ ಪಡೆದಿದ್ದರೂ ಜನರು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *