ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಸಂಚಾರಿ ಆಸ್ಪತ್ರೆಯನ್ನು ಆರಂಭಿಸಲಾಗಿದ್ದು, ಶೀಘ್ರವೇ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರೋಟರಿ ಬೆಂಗಳೂರು ಹೈಗ್ರೌಂಡ್ಸ್ ಸಹಯೋಗದೊಂದಿಗೆ ಇನ್ಫೋಸಿಸ್ ಫೌಂಡೇಶನ್ ಕೊಡ ಮಾಡಿರುವ ಸಂಚಾರಿ ಪ್ರಯೋಗಾಲಯಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ನಾಲ್ಕು ಜಿಲ್ಲೆಗಳಲ್ಲಿ ಮೊಬೈಲ್ ಆಸ್ಪತ್ರೆಯನ್ನು ಆರಂಭಿಸಲಾಗುವುದು. ಪ್ರಯೋಗ ಯಶಸ್ವಿಯಾದರೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

