Breaking News

ಭಾರತದ 5 ರಾಜ್ಯಗಳಲ್ಲಿ ಕೋವಿಡ್‌ ವೈರಸ್‌ ಸೋಂಕಿನ ಆರ್ಭಟ

ನವದೆಹಲಿ : ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕ ಸೇರಿದಂತೆ ಭಾರತದ 5 ರಾಜ್ಯಗಳಲ್ಲಿ ಕೋವಿಡ್‌ ವೈರಸ್‌ ಸೋಂಕಿನ ಆರ್ಭಟ ಹೆಚ್ಚಾಗಿದ್ದು, ನಾಲ್ಕನೇ ಅಲೆಯ ಭೀತಿ ಎದುರಾಗಿದೆ.

ಕಳೆದ ವಾರ ಭಾರತದಲ್ಲಿ ಸುಮಾರು 25,000 ಪ್ರಕರಣಗಳನ್ನು ದಾಖಲಾಗಿತ್ತು. ಇದು ಕಳೆದ 3 ತಿಂಗಳಲ್ಲಿ ದಾಖಲಾದ ಅತೀ ಹೆಚ್ಚು ಕೋವಿಡ್‌ ಪ್ರಕರಣವಾಗಿದೆ. ಅಲ್ಲದೇ ಪಾಸಿಟಿವಿಟಿ ದರ ಕೂಡ ಏರಿಕೆಯನ್ನು ಕಂಡಿದ್ದು ಸದ್ಯ ದೇಶದಲ್ಲಿ ಪಾಸಿಟಿವಿಟಿ ದರ 1.62 ಕ್ಕೆ ಏರಿಕೆ ಕಂಡಿದೆ. ಅದ್ರಲ್ಲೂ ಕೋವಿಡ್‌ ವೈರಸ್‌ ಸೋಂಕು ಹೆಚ್ಚಳವಾಗಿರುವ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ ಹಾಗೂ ದೆಹಲಿ ರಾಜ್ಯಗಳಲ್ಲಿ ಕೇಂದ್ರ ಸರಕಾರ ಕೋವಿಡ್‌ ವೈರಸ್‌ ಸೋಂಕು ತಡೆಗೆ ಕ್ರಮಕೈಗೊಳ್ಳುವಂತೆ ಸೂಚನೆಯನ್ನು ನೀಡಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *