Breaking News

3-4 ವಾರಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಆರಂಭವಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ. ಈ ಬೆಳವಣಿಗೆಯು ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ನಡುವಲ್ಲೇ ಆರೋಗ್ಯ ಇಲಾಖೆಯ ಆಯುಕ್ತ ಡಿ ರಂದೀಪ್ ಅವರು ಮುಂದಿನ 3-4 ವಾರಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಆರಂಭವಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಾತನಾಡಿ, ಜೂನ್ ಮತ್ತು ಜುಲೈ ತಿಂಗಳು ನಿರ್ಣಾಯಕ ತಿಂಗಳಾಗಿದ್ದು, ಮಾಸ್ಕ್ ಧರಿಸಿ, ಕೋವಿಡ್ ನಿಯಮಗಳನ್ನು ಅನುಸರಿಸುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸದಸ್ಯ ಮತ್ತು ಬೆಂಗಳೂರಿನ ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಅವರು ಮಾತನಾಡಿ, ನಿಧಾನಗತಿಯಲ್ಲಿ ಸೋಂಕು ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ. 3-4 ವಾರಗಳಲ್ಲಿ ನಾಲ್ಕನೇ ಅಲೆ ಆರಂಭವಾಗಬಹುದು ಎಂದು ಹೇಳಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *