ಹುಬ್ಬಳ್ಳಿ : ಆರ್ ಎಸ್ ಎಸ್ ಚಡ್ಡಿ ಕುರಿತ ಸಿದ್ಧರಾಮಯ್ಯ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂ ರಂತೆ ವರ್ತನೆ ಮಾಡ್ತಿಲ್ಲ. ಪುಂಡ, ಪೋಕರಿಗಳ ರೀತಿ, ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ. ಅವರು ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಐದು ವರ್ಷ ಸಿಎಂ ಆಗಿದ್ದವರ ಸಂಸ್ಕೃತಿ ಇದಲ್ಲ.
ಚಡ್ಡಿ ಹಾಕಿದ ಆರ್ ಎಸ್ ಎಸ್ ಕಾರ್ಯಕರ್ತರಿಂದಲೇ ದೇಶ ಒಗ್ಗಾಟ್ಟಾಗಿದೆ, ದೇಶ ಉಳಿದಿದೆ ಅವರು ಆರ್ ಎಸ್ ಎಸ್ ಬಗ್ಗೆ ಮಾತನಾಡಿ ಅಲ್ಪಸಂಖ್ಯಾತರ ಮತ ಪಡೆಯಬಹುದ ಎಂದುಕೊಂಡಿದ್ದಾರೆ. ಇದೇ ಸಿದ್ದರಾಮಯ್ಯಗೆ ತಿರುಗು ಬಾಣವಾಗುತ್ತೆ
ಪದೇ ಪದೇ ಆರ್ ಎಸ್ ಎಸ್ ಬಗ್ಗೆ ಮಾತನಾಡಿದ್ರೆ ಸಿದ್ದರಾಮಯ್ಯಗೆ ಉಳಿಗಾಲವಿಲ್ಲ. ಈಗಾಗಲೇ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗಿದೆ ಸಿದ್ದರಾಮಯ್ಯ ನವರು ಇದನ್ನು ಅರಿತು ಮಾತನಾಡಬೇಕು. ಇಲ್ಲದಿದ್ದಲ್ಲಿ ಕಾಂಗ್ರೆಸ್ ಸರ್ವನಾಶ ಖಚಿತ
ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಚುನಾವಣಾ ವಿಚಾರ ನಮ್ಮ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರ ಮತದಾರರ ಒಲವಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಗೆಲವು ನಿಶ್ಚಿತ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

