Breaking News

ಆಮ್‌ ಆದ್ಮಿ ಪಾರ್ಟಿ ಅಧಿಕೃತವಾಗಿ ಸೇರ್ಪಡೆಯಾದ ಮುಖ್ಯಮಂತ್ರಿ ಚಂದ್ರು


ಬೆಂಗಳೂರು: ಖ್ಯಾತ ನಟ, ಮಾಜಿ ವಿಧಾನ ಪರಿಷತ್‌ ಸದಸ್ಯ ಮುಖ್ಯಮಂತ್ರಿ ಚಂದ್ರುರವರು ಆಮ್‌ ಆದ್ಮಿ ಪಾರ್ಟಿ ಅಧಿಕೃತವಾಗಿ ಮಂಗಳವಾರ ಸೇರ್ಪಡೆಯಾದರು. ಬೆಂಗಳೂರಿನ ಹೋಟೆಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಚಂದ್ರುರವರನ್ನು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪಕ್ಷಕ್ಕೆ ಬರಮಾಡಿಕೊಂಡರು.

ಆ ಬಳಿಕ ಮಾತನಾಡಿದ ಪೃಥ್ವಿ ರೆಡ್ಡಿ ‘ಮುಖ್ಯಮಂತ್ರಿ ಚಂದ್ರುರವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇವುಗಳ ರಕ್ಷಣೆಯು ನಮ್ಮ ಪಕ್ಷದ ಮೂಲ ಸಿದ್ಧಾಂತ ಕೂಡ ಆಗಿದೆ. ಭಾರತವು ರಾಜ್ಯಗಳ ಒಕ್ಕೂಟವಾಗಿದ್ದು, ಆಯಾ ರಾಜ್ಯಗಳಲ್ಲಿ ಆಯಾ ಭಾಷೆಗಳನ್ನು ಪ್ರೋತ್ಸಾಹಿಸುವ ಮೂಲಕ ಪ್ರಾದೇಶಿಕತೆಗೆ ಒತ್ತು ನೀಡಿ ರಾಷ್ಟ್ರದ ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡುವುದೇ ಎಎಪಿಯ ಸ್ಪಷ್ಟ ನಿಲುವು. ಸತತ ನಲವತ್ತಕ್ಕೂ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿ ನಾಟಕದ ಮೂಲಕ ರಾಜಕೀಯ ಕ್ಷೇತ್ರವನ್ನು ಶುದ್ಧೀಕರಣ ಮಾಡುವ ದಿಶೆಯಲ್ಲಿ ಚಂದ್ರುರವರು ಸಾಕಷ್ಟು ಶ್ರಮಿಸಿದ್ದಾರೆ ‘ ಎಂದು ಹೇಳಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *