Breaking News

ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಅಂದ್ರೆ ಯಡಿಯೂರಪ್ಪ : ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದಾಗಿ ಕಾಂಗ್ರೆಸ್ ನಿರ್ನಾಮ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್​ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರ ಎದುರು ಈ ಬಗ್ಗೆ ಪ್ರತಿಕ್ರಿಸಿದ ಹೆಬ್ಬಾಳ್ಕರ್, ‘ಸಿದ್ದರಾಮಯ್ಯ ಮತ್ತು ಶಿವಕುಮಾರ್ ವಿಚಾರ ಬಿಡಿ. ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನ ನಡೆಸಿಕೊಳ್ಳುವ ರೀತಿಯನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಹೇಬ್ರು ನೋಡಬೇಕು’ ಎಂದು ಅವರು ತಿರುಗೇಟು ನೀಡಿದ್ದಾರೆ. ‘ಕರ್ನಾಟಕದಲ್ಲಿ ಬಿಜೆಪಿ ಸಂಘಟನೆ ಆಗೋದಕ್ಕೆ ಬಿಎಸ್ ಯಡಿಯೂರಪ್ಪರ ಪ್ರಾಮಾಣಿಕ ಪ್ರಯತ್ನ ಇದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಿಂದ ಕೆಳಗೆ ಇಳಿಸಿದರು. ಲಿಂಗಾಯತ ಸಮಾಜ ಬಿಎಸ್​ ವೈ ಇದೆ ಎಂದು ಪ್ರಚಾರ ಮಾಡಿದರು. ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಅಂದ್ರೆ ಯಡಿಯೂರಪ್ಪ. ಅವರನ್ನು ಪಕ್ಷದಿಂದ ಹೊರಗೆ ಇಟ್ಟರು. ಅವರ ಮಗನಿಗೆ ಎಂಎಲ್​ ಸಿ ಟಿಕೆಟ್ ಕೂಡ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *