Breaking News

ಕೊರೋನಾ ಪರೀಕ್ಷೆ ಹೆಚ್ಚಳದಿಂದಾಗಿ ಹೊಸ ಪ್ರಕರಣಗಳು ಏರಿಕೆ

ಬೆಂಗಳೂರು: ‘ರಾಜ್ಯದಲ್ಲಿ ಕೊರೋನಾ ಸೋಂಕಿನ ಮತ್ತೊಂದು ಅಲೆಯ ಯಾವುದೇ ಲಕ್ಷಣಗಳೂ ಕಂಡುಬಂದಿಲ್ಲ. ಸೋಂಕು ಕೂಡ ತಟಸ್ಥವಾಗಿದ್ದು, ಪರೀಕ್ಷೆ ಹೆಚ್ಚಳದಿಂದಾಗಿ ಹೊಸ ಪ್ರಕರಣಗಳು ತುಸು ಹೆಚ್ಚಾಗಿವೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಒಂದಿಷ್ಟುಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಆತಂಕಪಡಬೇಕಿಲ್ಲ.

ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿದ್ದು, ವರ್ಕ್ಫ್ರಂ ಹೋಂ ನೀತಿಯಿಂದ ಹೊರಬಂದು ಐಟಿ ಕಂಪನಿಗಳು ಕಚೇರಿ ಕೆಲಸ ಆರಂಭಿಸಿವೆ. ಕಳೆದ ಒಂದು ವಾರದಿಂದ ಕೊರೋನಾ ಹೊಸ ಪ್ರಕರಣಗಳು ಒಂದಿಷ್ಟುಹೆಚ್ಚಳವಾಗಿರುವುದು ಹಾಗೂ ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಜಾರಿಗೊಳಿಸಿರುವ ಕಡ್ಡಾಯ ಮಾಸ್‌್ಕ ನಿಯಮ ಜಾರಿ ಸಲಹೆಯಿಂದ ರಾಜ್ಯದಲ್ಲಿ ಮತ್ತೊಂದು ಅಲೆ ಆರಂಭವಾಯಿತು ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದೆ. ಆದರೆ, ತಜ್ಞರು ಮತ್ತೊಂದು ಅಲೆ, ಸೋಂಕು ಹೆಚ್ಚಳ ವಾತಾವರಣ ಇಲ್ಲ ಎಂದು ಸ್ಪಷ್ಟಪಡಿಸುತ್ತಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *