Breaking News

ಹಿರಿಯ ನಾಗರಿಕರ ಕುರಿತು ಆಡಳಿತಾ ಸುಧಾರಣೆ ಇಲಾಖೆ ಮಹತ್ವದ ನಿಯಮ ಹೊರಡಿಕೆ


ಬೆಂಗಳೂರು: ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸದೇ ಇದ್ದರೆ, ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಿಬ್ಬಂದಿ ಹಾಗೂ ಆಡಳಿತಾ ಸುಧಾರಣೆ ಇಲಾಖೆ ಎಚ್ಚರಿಕೆ ನೀಡಿದೆ.

ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬಂದಾಗ ಆಸನದ ವ್ಯವಸ್ಥೆ ಮಾಡುವಂತೆ ಹಾಗೂ ಅವರುಗಳ ಮನವಿ/ ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ, ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುವಂತೆ ಸ್ಪಷ್ಟ ನಿರ್ದೇಶನದೊಂದಿಗೆ ಕಳೆದ ಜೂನ್ 21ಕ್ಕೆ ಸುತ್ತೋಲೆ ಹೊರಡಿಸಲಾಗಿತ್ತು.

ಆದರೆ, ಸರ್ಕಾರದ ಸುತ್ತೋಲೆಯನ್ನು ಪಾಲಿಸದೇ ಇರುವ ಬಗ್ಗೆ ಹಾಗೂ ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸುತ್ತಿರುವ ಕುರಿತು ಹಿರಿಯ ನಾಗರಿಕರುಗಳಿಂದ ದೂರುಗಳು ಸ್ವೀಕೃತವಾಗುತ್ತಿದೆ. ಈ ಹಿನ್ನೆಲೆ ಕಳೆದ ಜೂನ್ ನಲ್ಲಿ ಹೊರಡಿಸಲಾದ ಸುತ್ತೋಲೆಯನ್ನು ಅಕ್ಷರಶಃ ಪಾಲಿಸುವಂತೆ ಸಚಿವಾಲಯದ ಎಲ್ಲ ಇಲಾಖೆಗಳು ತಮ್ಮ ಅಧೀನದ ಕಚೇರಿಗಳಿಗೆ ಸ್ಪಷ್ಟ ಸೂಚನೆ ನೀಡುವಂತೆ ಸೂಚಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *