ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಸಂಗ್ರಹಿಸಿದ್ದ ಚಡ್ಡಿಗಳನ್ನು ಹೊತ್ತು ತಮ್ಮ ಮನೆಯತ್ತ ಮೆರವಣಿಗೆಯಲ್ಲಿ ಸಾಗಿದ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಅವರ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಯಾರ್ಯಾರದೋ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ ಮನಸ್ಥಿತಿಗೆ ನನ್ನ ಧಿಕ್ಕಾರ ಎಂದು ಗುಡುಗಿದ್ದಾರೆ.
ಆರ್‌ಎಸ್‌ಎಸ್ ಅನ್ನು ‘ಆರ್ಯರ ಆರ್‌ಎಸ್‌ಎಸ್’ ಎಂದು ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ ಜಾತಿಗಳು ಯಾಕೆ ಇಲ್ಲ? ಎನ್ನುವ ನನ್ನ ಪ್ರಶ್ನೆಗೆ ಆರ್‌ಎಸ್‌ಎಸ್‌ನವರು, ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ’ ಎಂದು ಕುಟುಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

