ವಿಧಾನ ಪರಿಷತ್ ಚುನಾವಣೆ, ರಾಜ್ಯಸಭಾ ಚುನಾವಣೆ ಹೀಗೆ ಎಲ್ಲಾ ಸಂದರ್ಭದಲ್ಲೂ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಎಂಬ ಮಾತು ಕೇಳಿಬಂದಿತ್ತು. ಅದರಲ್ಲೂ ಬಿ.ವೈ.ವಿಜಯೇಂದ್ರ ಗೆ ವಿಧಾನ ಪರಿಷತ್ ಸ್ಥಾನ ನೀಡದೇ ಇದ್ದಾಗಲೂ ಬಿಎಸ್ವೈ ಕಡೆಗಣನೆ ಆಗ್ತಿದೆ ಎಂದೇ ಅರ್ಥೈಸಲಾಗ್ತಿತ್ತು.
ಆದರೆ ಈಗ ಸಂದೇಹಗಳಿಗೆಲ್ಲ ಬಿಎಸ್ವೈ ಉತ್ತರ ನೀಡಿದ್ದು, ನನಗೆ ವಯಸ್ಸಾಗಿದೆ ಎಂಬ ಚಿಂತೆ ಪಕ್ಷದ ಕಾರ್ಯಕರ್ತರಿಗೆ ,ಮುಖಂಡರಿಗೆ ಬೇಡ ನಾನಿನ್ನು 10 ವರ್ಷ ರಾಜ್ಯದಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಬಿಎಸ್ವೈ ಗುಡುಗಿದ್ದಾರೆ. ಆ ಮೂಲಕ ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಬೇಕೆಂದು ಹೈಕಮಾಂಡ್ ಗೆ ರಾಜಾಹುಲಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ವಿಧಾನಪರಿಷತ್ ವಾಯುವ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಚುನಾವಣೆಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಬಿ.ಎಸ್.ಯಡಿಯೂರಪ್ಪ ವಿಜಯಪುರದಲ್ಲಿ ಮಾತನಾಡುವ ವೇಳೆ ತುಸು ಭಾವುಕರಾರದೂ ಮಾತಿನಲ್ಲಿ ಖಡಕ್ ಆಗಿ ಸಂದೇಶ ರವಾನಿಸಿದ್ದಾರೆ. ನನಗೆ 70 ವರ್ಷ ವಯಸ್ಸಾಯಿತು. 80 ವರ್ಷ ವಯಸ್ಸಾಯಿತು ಎಂದು ನೀವು ಯೋಚನೆ ಮಾಡಬೇಡಿ. ಇನ್ನು 10 ವರ್ಷಗಳ ಕಾಲ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡ್ತೇನೆ.ಮುಂದಿನ ದಿನಗಳಲ್ಲಿ ಮತ್ತೆ ಬಂದು ರಾಜಕೀಯ ಭಾಷಣ ಮಾಡುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

