Breaking News

ಜೂ. 11 ರವರೆಗೆ ಕರ್ನಾಟಕ, ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ


ಬೆಂಗಳೂರು : ಪಶ್ಚಿಮ ಮಾರುತಗಳ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅದ್ರಲ್ಲೂ ಜೂನ್ 11 ರವರೆಗೆ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆ ಕೆಲವು ದಿನಗಳಿಂದಲೂ ಬಿಡುವು ಪಡೆದಿದೆ. ಆದರೆ ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಉತ್ತಮ ಮಳೆ ಸುರಿದಿದೆ. ಇದೀಗ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಕೇರಳ ಹಾಗೂ ಕರ್ನಾಟಕಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅದ್ರಲ್ಲೂ ಎರಡು ರಾಜ್ಯಗಳಲ್ಲಿ ದಿನಕ್ಕೆ 50 ಮಿಮೀ ಮಳೆ ಸುರಿಯಲಿದೆ ಎಂದು ಹವಾಮಾನ ಡಾಟ್ ಕಾಮ್ ಹವಾಮಾನ ತಜ್ಞರು ಸೂಚಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *