Breaking News

ಸಿದ್ದರಾಮಯ್ಯ ಅವರ ಘನತೆಗೆ ತಕ್ಕಂತೆ ವರ್ತಿಸಬೇಕು :: ಶೆಟ್ಟರ್ ‌ಟೀಕೆ


ಹುಬ್ಬಳ್ಳಿ: ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳು. ಅವರ ಘನತೆಗೆ ತಕ್ಕಂತೆ ವರ್ತಿಸಬೇಕು. ಅದು ಬಿಟ್ಟು ಪುಂಡ, ಪೋಕರಿಗಳ ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಟೀಕಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಐದು ವರ್ಷ ಮುಖ್ಯಮಂತ್ರಿ ಆಗಿದ್ದವರ ಸಂಸ್ಕೃತಿ ಇದಲ್ಲ. ಚಡ್ಡಿ ಹಾಕಿರುವ ಆರ್‌ಎಸ್‌ಎಸ್‌ ಕಾರ್ಯಕರ್ತರಿಂದಲೇ ದೇಶ ಒಗ್ಗಟ್ಟಾಗಿದೆ, ದೇಶ ಉಳಿದಿದೆ. ಅವರು ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿ ಅಲ್ಪಸಂಖ್ಯಾತರ ಮತ ಪಡೆಯಬಹುದು ಎಂದುಕೊಂಡಿದ್ದಾರೆ. ಇದು ಸಿದ್ದರಾಮಯ್ಯಗೆ ತಿರುಗು ಬಾಣವಾಗುತ್ತೆ ಎಂದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *