ಮೈಸೂರು: ಪ್ರತಾಪ್ ಸಿಂಹ ಒಬ್ಬ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಾವೆಲ್ಲರೂ ಒಟ್ಟಿಗೆ ಲಾ ಪ್ರಾಕ್ಟೀಸ್ ಮಾಡಿದ್ದೇವೆ.ಅವನಿಗೇನಾಗಿದೆ ಬಾಯಿಗೆ ಬಂದಂಗೆ ಮಾತನಾಡುತ್ತಾನೆ. ಮಹಾರಾಜರನ್ನು ಬಿಟ್ಟರೇ ನಾನೇ ಹೆಚ್ಚು ಕೆಲಸ ಮಾಡಿದ್ದೇನೆ ಎಂದು ಕೊಚ್ಚಿಕೊಳ್ಳುತ್ತಾನೆ. ಈ ಎಂಪಿ ಕಾಲದಲ್ಲಿ ಏನೂ ಕೆಲಸವಾಗಿಲ್ಲ ಎಂದು ಆರೋಪಿಸಿದರು.
2014ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ, ನಾನು ಸೋಲುತ್ತಿರಲಿಲ್ಲ. ರಾಜ್ಯದ ಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕುತ್ತಿದ್ದೀರಾ, ನಿಮಗೆ ನಾಚಿಕೆ ಆಗುವುದಿಲ್ಲವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

