Breaking News

ಕಾಂಗ್ರೆಸ್‌ ಅಧಿಕಾರಕ್ಕೆ ಬಂದೇ ಬಿಡುತ್ತದೆ ಎಂಬ ಭ್ರಮೆ ಆ ಪಕ್ಷದಲ್ಲಿ ಹೆಚ್ಚಾಗಿದೆ : ಯಡಿಯೂರಪ್ಪ



ಬೆಳಗಾವಿ: ‘ಮುಂದೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದೇ ಬಿಡುತ್ತದೆ ಎಂಬ ಭ್ರಮೆ ಆ ಪಕ್ಷದಲ್ಲಿ ಹೆಚ್ಚಾಗಿದೆ. ವಿಧಾನ ಪರಿಷತ್‌ ಚುನಾವಣೆಯ ಎಲ್ಲ ಸ್ಥಾನಗಳಲ್ಲೂ ಅವರನ್ನು ಸೋಲಿಸುವ ಮೂಲಕ, ಭ್ರಮಾಲೋಕದಿಂದ ಹೊರತರಬೇಕು’ ಎಂದು ಶಾಸಕ ಬಿ.ಎಸ್‌.ಯಡಿಯೂರಪ್ಪ ಕಾರ್ಯಕರ್ತರಿಗೆ ಕರೆ ನೀಡಿದರು.

ವಿಧಾನ ಪರಿಷತ್‌ ವಾಯವ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ, ಪದವೀಧರ ಕ್ಷೇತ್ರದ ಅಭ್ಯರ್ಥಿ ಹಣಮಂತ ನಿರಾಣಿ ಅವರ ಪರ, ನಗರದಲ್ಲಿ ಬುಧವಾರ ಚುನಾವಣಾ ಪ್ರಚಾರ ಭಾಷಣ ಮಾಡಿ ಅವರು ಮಾತನಾಡಿದರು.

‘ಇನ್ನೂ ಚುನಾವಣೆ ನಿಗದಿಯಾಗಿಲ್ಲ. ಆದರೆ, ಈಗಾಗಲೇ ಗೆದ್ದು ಬಿಟ್ಟಿದ್ದೇವೆ ಎನ್ನುವ ಉಮೇದಿನಲ್ಲಿ ಕಾಂಗ್ರೆಸ್ಸಿಗರು ತೇಲಾಡುತ್ತಿದ್ದಾರೆ. ಯಾರಿಗೆ ಯಾವ ಖಾತೆ ಬೇಕು ಎಂದು ಹಂಚಿಕೊಳ್ಳುತ್ತಿದ್ದಾರೆ. ವಿಧಾನ ಪರಿಷತ್‌ ಚುನಾವಣೆಯ ಬಳಿಕ ಅವರ ಹುಚ್ಚು ಬಿಡುವಂತೆ ಮಾಡಿ’ ಎಂದು ಮೂದಲಿಸಿದರು.

Share News

About BigTv News

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *