Breaking News

ವ್ಯಕ್ತಿ ಮೇಲೆ ಹಲ್ಲೆ : ನಟ ಜೈ ಜಗದೀಶ್ ವಿರುದ್ಧ ದೂರು ದಾಖಲು


ಮಂಡ್ಯ : ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ಜೈಜಗದೀಶ್ ಮತ್ತಿತರರ ವಿರುದ್ಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 5ರಂದು ಈ ಘಟನೆ ನಡೆದಿದ್ದು, ಜಯರಾಮೇಗೌಡ ಎಂಬವರು ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು.ಈ ವೇಳೆ ಅವರು ನಿರ್ವಾಹಕನಿಗೆ ಹೇಳಿ ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ. ಇದೇ ಸಂದರ್ಭದಲ್ಲಿ ಹಿಂದಿನಿಂದ ಕಾರಿನಲ್ಲಿ ಬಂದ ಜೈಜಗದೀಶ್ ಮತ್ತಿತರರು, ಯಾಕೋ ಬಸ್ಸಿನಿಂದ ಬಾಟಲಿ ಎಸೆಯುತ್ತೀಯಾ ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಈಗ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *