ವಿಜಯಪುರ : ಬಿಜೆಪಿ ಬಿಎಸ್ವೈ ಹಾಗೂ ಅವರ ಕುಟುಂಬವನ್ನು ಪಕ್ಕಕ್ಕೆ ಸರಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.
ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಅವರಿಂದ ನನಗೆ ಯಾವುದೇ ಸರ್ಟಿಫಿಕೇಟ್ ಬೇಕಿಲ್ಲಾ ಬಿಜೆಪಿ ನನಗೆ ಕೊಟ್ಟಿರೋ ಸ್ಥಾನಮಾನಗಳು ಬೇರೆ ಯಾರಿಗೂ ಸಿಕ್ಕಿಲ್ಲ.
ನಾಲ್ಕು ಬಾರಿ ಸಿಎಂ ಆಗಿದ್ದೇ, ಎಲ್ಲಾ ಅವಕಾಶ ಸಿಕ್ಕಿವೆ. ನಾನೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದವನು. ಆದರೂ ಅದೇ ಗೌರವವನ್ನು ಜನ ಪಕ್ಷ ಇಟ್ಟುಕೊಂಡಿದೆ.ಮುಂದಿನ ದಿನಗಳಲ್ಲಿ ಪಕ್ಷ ಬಹುಮತ ಪಡೆಯಲು ಏನೇನು ಪ್ರಯತ್ನ ಮಾಡಬೇಕೊ ಅದನ್ನು ಮಾಡೇ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ಮುಂದುವರೆದು ಮಾತನಾಡಿದ ಅವರು, ನಿಶ್ಚಿತವಾಗಿ ಬರೋ ಚುನಾವಣೆಯಲ್ಲಿ ಸಹ 140 ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವವರಿದ್ದೇವೆ. ಯಾವುದೋ ಭ್ರಮೆನಲ್ಲಿ ಸಿದ್ದರಾಮಯ್ಯ, ನಾವು ಅಧಿಕಾರಕ್ಕೆ ಬರುತ್ತೇವೆಂದು ಭ್ರಮೆಯಲ್ಲಿದ್ದಾರೆ. ಅದಕ್ಕೆ ನಾವು ಅವಕಾಶ ನೀಡಲ್ಲಾ, ನಾವೆಲ್ಲಾ ಒಟ್ಟಾಗಿ ಒಂದಾಗಿ ವಿಧಾನಸಭಾ ಚುನಾವಣೆಯಲ್ಲಿ 140 ಸೀಟ್ ಗಳನ್ನು ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರೋರು ಇದ್ದೇವೆ ಎಂದು ಹೇಳಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

