Breaking News

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ : ಯಡಿಯೂರಪ್ಪ


ವಿಜಯಪುರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉಪಾಧ್ಯಕ್ಷರಾದ, ಪುತ್ರ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ.ಅವರು ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲುವ ವಿಶ್ವಾಸ ತಮಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.‌

ಪರಿಷತ್‌ ಚುನಾವಣೆಯಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್‌ ನೀಡದೇ ಕಡೆಗಣಿಸಲಾಗಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ನಗರದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಅವರು, ಒಂದೇ ಕುಟುಂಬದವರಿಗೆ ಟಿಕೆಟ್‌ ಕೊಡಬಾರದು ಎಂಬುದು ಪ್ರಧಾನಿ ಮೋದಿ ಅವರ ತೀರ್ಮಾನ. ಈ ಹಿನ್ನೆಲೆಯಲ್ಲಿ ನೀಡಿಲ್ಲ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ದೇವರು ಮತ್ತು ನಾಡಿನ ಜನರ ಆಶೀರ್ವಾದ ಇದ್ದರೆ ನಾನು ಇನ್ನೂ 10 ವರ್ಷ ರಾಜಕೀಯದಲ್ಲಿ ಇರುತ್ತೇನೆ. ರಾಜ್ಯದಾದ್ಯಂತ ಓಡಾಡಿ ಪಕ್ಷವನ್ನು ಸಂಘಟಿಸುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿ, 140 ಸ್ಥಾನಗಳೊಂದಿಗೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *