Breaking News

ರೈಲಿನಡಿ ಸಿಲುಕಿದ ಮಹಿಳೆಯನ್ನು ರಕ್ಷಿಸಿದ ರೈಲ್ವೇ ಪೊಲೀಸ್!

ಗದಗ: ಚಲಿಸುತ್ತಿದ್ದ ರೈಲು ಹತ್ತುವ ವೇಳೆ ಆಯಾ ತಪ್ಪಿ ರೈಲಿನಡಿ ಸಿಲುಕಿ ಪ್ರಾಣಾಪಾಯದಲ್ಲಿದ್ದ ಮಹಿಳೆಯೊಬ್ಬಳನ್ನು ಸ್ಥಳದಲ್ಲಿಯೇ ಇದ್ದ ರೈಲ್ವೇ ಪೊಲೀಸ್ ಸಿಬ್ಬಂದಿಯೊಬ್ಬರು ರಕ್ಷಣೆ ಮಾಡಿ ಸಮಯ ಪ್ರಜ್ಣೆ ಮೆರೆದ ಘಟನೆ ಗದಗ ರೈಲ್ವೆ ಜಂಕ್ಷನ್​ನಲ್ಲಿ ನಡೆದಿದೆ.

ನಿನ್ನೆ ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಾಯಿರಾ ಎಂಬ ಮಹಿಳೆ ತಮ್ಮ ಕುಟುಂಬ ಸಮೇತರಾಗಿ ಹುಬ್ಬಳ್ಳಿ ವಿಜಯಪುರ ಪ್ಯಾಸೆಂಜರ್ ರೈಲಿನ ಮೂಲಕ ಗದಗ ಮಾರ್ಗವಾಗಿ ವಿಜಯಪುರ, ಸೊಲ್ಲಾಪುರಕ್ಕೆ ಹೊರಟಿದ್ರು. ಗದದ ರೈಲು ನಿಲ್ದಾಣದಲ್ಲಿ ರೈಲು ನಿಂತಾಗ ನೀರನ್ನು ತರಲು ಹೋಗಿದ್ರು. ಆ ವೇಳೆಗೆ ರೈಲು ಹೊರಟಿದೆ. ಓಡೋಡಿ ಹೋಗಿ ರೈಲು ಹತ್ತುವಷ್ಟರಲ್ಲಿ ಸಾಯಿರಾ ಆಯಾ ತಪ್ಪಿ ರೈಲಿನಡಿ ಸಿಲುಕಿ ಪ್ರಾಣಾಪಾಯದಲ್ಲಿದ್ದಳು. ಆದ್ರೆ ಅಲ್ಲಿಯೇ ಇದ್ದ ಅನ್ವರ್ ಬಾಷಾ ಎಂಬ ಪೊಲೀಸ್ ಸಿಬ್ಬಂದಿ ಸಾಯಿರಾಳನ್ನು ರಕ್ಷಣೆ ಮಾಡಿದ್ದಾರೆ. ರಕ್ಷಣೆ ಮಾಡಿದ ದೃಶ್ಯಾವಳಿಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಯನ್ನು ರಕ್ಷಣೆ ಮಾಡಿದ್ದಕ್ಕೆ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಅನ್ವರ್​ ಬಾಷಾ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು ಅನ್ವರ್ ಅವರ ಸಮಯ ಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *