ಕಲಬುರಗಿ: 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿಯಲ್ಲಿ ಸಿಐಡಿಯಿಂದ ಮತ್ತಿಬ್ಬರು ಆರೋಪಿಗಳ ಬಂಧನವಾಗಿದೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ನಿವಾಸಿಗಳಾದ ಮಹೇಶ್ ಹಿರೋಳಿ, ಸೈಫನ್ ಬಂಧಿತರು. ಬಂಧಿತರು ಕಿಂಗ್ಪಿನ್ ರುದ್ರಗೌಡ ಪಾಟೀಲ್ನ ಸಹಚರರು.ಇವರು ನೇಮಕಾತಿ ಅಕ್ರಮದಲ್ಲಿ ರುದ್ರಗೌಡನ ಜೊತೆ ಶಾಮೀಲು ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಸೈಫನ್ ಸಹೋದರ ಪಿಎಸ್‌ಐ ಆಗಿ ಆಯ್ಕೆಯಾಗಿದ್ದ. ಆತನ ಆಯ್ಕೆ ಬಗ್ಗೆಯೂ ಸಿಐಡಿ ತಂಡ ತನಿಖೆ ನಡೆಸುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

