ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಮತದಾನ ಆರಂಭಗೊಂಡಿದ್ದು, ಈಗಾಗಲೇ ಕೆಲವು ಶಾಸಕರು ವಿಧಾನಸೌಧಕ್ಕೆ ತರಳಿ ಕೊಠಡಿ ಸಂಖ್ಯೆ 106ರಲ್ಲಿ ಮತ ಚಲಾಯಿಸಿದ್ದಾರೆ.
ಅಡ್ಡ ಮತದಾನದ ಸಾಧ್ಯತೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ, ‘ಇಂದಿನ ಚುನಾವಣೆಯಲ್ಲಿ ನಮ್ಮ ಪಕ್ಷದ 32 ಶಾಸಕರಲ್ಲಿ 31 ಶಾಸಕರು ನಮ್ಮ ಪಕ್ಷದ ಅಭ್ಯರ್ಥಿಯ ಮತ ಚಲಾಯಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದು, ಈ ಕುರಿತು ಭರವಸೆ ನೀಡಿದ್ದಾರೆ. ಆದರೆ, ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ಗೆ ಮತ ಹಾಕ್ತೀವಿ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

