Breaking News

ಶ್ರೀನಿವಾಸಗೌಡಗೆ ಮಾನ ಮರ್ಯಾದೆ ಇದ್ದರೆ ಜೆಡಿಎಸ್‌ಗೆ ರಾಜೀನಾಮೆ ಕೊಡಲಿ : ಕುಮಾರಸ್ವಾಮಿ


ಬೆಂಗಳೂರು : ಕಾಂಗ್ರೆಸ್ ಪರ ಮತ ಚಲಾಯಿಸಿದ ಶಾಸಕ ಶ್ರೀನಿವಾಸಗೌಡಗೆ ಮಾನ ಮರ್ಯಾದೆ ಇದ್ದರೆ ಜೆಡಿಎಸ್‌ಗೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಶ್ರೀನಿವಾಸಗೌಡ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ ಎಂದು ಬೆಳಗ್ಗೆಯೇ ಹೇಳಿದ್ದೆ. ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್‌ ಶಾಸಕ ಸ್ಥಾನ ಉಳಿಸಿಕೊಳ್ಳುವುದು ಕೋಲಾರ ಜನತೆಗೆ ಮಾಡಿದ ಅವಮಾನ. ಕಾಂಗ್ರೆಸ್‌ಗೆ ಮತವೂ ಹಾಕಬೇಕು, ಶಾಸಕ ಸ್ಥಾನವೂ ಉಳಿಯಬೇಕು ಎಂದರೆ ಯಾವ ನೈತಿಕತೆ ಇದೆ. ಮಾನ ಮರ್ಯಾದೆ ಎಂಬುದು ಇದ್ದರೆ ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟುಹೋಗಲಿ ಎಂದು ಹೇಳಿದ್ದಾರೆ.

ಜೆಡಿಎಸ್‌ಗೆ ಮತ ಚಲಾಯಿಸಬೇಕು ಎಂದು ವಿಪ್ ಜಾರಿ ಮಾಡಿದ್ದೆವು ನಿಜ. ಆದರೆ, ಅದರಿಂದ ಏನು ಪ್ರಯೋಜನ ಇದೆ. ಭಾರತದಲ್ಲಿ ಕಾನೂನುಗಳು ಇವೆ. ಆದರೆ, ಅದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತಹ ಅವಕಾಶ ನೀಡಿಲ್ಲ. ಆ ಮನುಷ್ಯ ಜೆಡಿಎಸ್ ಸಿಂಬಲ್‌ನಿಂದ ಗೆದ್ದು, ಕಾಂಗ್ರೆಸ್ ಜೊತೆ ಒಡನಾಟ ಇಟ್ಟುಕೊಂಡು ಯಾವ ರೀತಿ ಕ್ಷೇತ್ರದಲ್ಲಿ ರಾಜಕಾರಣ ಮಾಡುತ್ತಾರೆ ಎಂದು ಪ್ರಶ್ನಿಸಿದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *