Breaking News

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ 1, ಬಿಜೆಪಿ 2, ಜೆಡಿಎಸ್ ೦


ಬೆಂಗಳೂರು:ಕರ್ನಾಟಕದಿಂದ ನಡೆದ ರಾಜ್ಯಸಭಾ ಚುನಾವಣೆಯ ಮತದಾನ ಮತ್ತು ಎಣಿಕೆ ಶುಕ್ರವಾರ ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದ್ದ ನಾಲ್ಕನೇ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್ ಅವರು ಗೆದ್ದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಒಮ್ಮತದ ಕೊರತೆ ಬಿಜೆಪಿಗೆ ಲಾಭ ಮಾಡಿ ಕೊಟ್ಟಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ ನಿಂದ ಜೈರಾಂ ರಮೇಶ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದು, ಜೆಡಿಎಸ್ ನ ಕುಪೇಂದ್ರ ರೆಡ್ಡಿ ಮತ್ತು ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ ಸೋಲು ಅನುಭವಿಸಿದ್ದಾರೆ.

ನಿರ್ಮಲಾ ಸೀತಾರಾಮನ್ 46 ಮತ,ಜಗ್ಗೇಶ್ 44 ಮೊದಲ ಪ್ರಾಶಸ್ತ್ಯದ ಮತ ಪಡೆದು ನಿರೀಕ್ಷಿತ ಗೆಲುವು ಸಾಧಿಸಿದರು. , ಕಾಂಗ್ರೆಸ್ ನಿಂದ ಜೈರಾಂ ರಮೇಶ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದು, ಜೆಡಿಎಸ್ ನ ಕುಪೇಂದ್ರ ರೆಡ್ಡಿ 30 ಮತ ಮತ್ತು ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ 25 ಮತ ಪಡೆದು ಸೋಲು ಅನುಭವಿಸಿದ್ದಾರೆ. ಲೆಹರ್ ಸಿಂಗ್ 36 ಮತಗಳನ್ನು ಪಡೆದು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *