Breaking News

ಮಾಜಿ ಸಿಎಂ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

ಬೆಂಗಳೂರು: ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಬಿ ಟೀಮ್ ಯಾವುದು? ಬಿಜೆಪಿಯ ಬಾಲಂಗೋಚಿ ಯಾರು ಎನ್ನುವುದು ಜಗಜ್ಜಾಹೀರು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ, ರಾಷ್ಟ್ರೀಯ ಪಕ್ಷಗಳು ತಮ್ಮ ರಾಜಕೀಯ ಸ್ವಾರ್ಥ ಸಾಧನೆಗೆ ಪ್ರಾದೇಶಿಕ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡಿವೆ ಹಾಗೂ ಪ್ರಜಾಪ್ರಭುತ್ವದ ಬೆನ್ನಿಗಿರಿಯುವ ಹೀನ ಕೃತ್ಯ ಎಸಗಿವೆ. ಚುನಾವಣಾ ವ್ಯವಷ್ಟೆಯನ್ನೆ ಅಣಕ ಮಾಡುವೆ ಎಂದು ಅವರು ಕಿಡಿಕಾರಿದರು.

ರಾಜ್ಯಸಭೆ ಚುನಾವಣೆ ಫಲಿತಾಂಶದ ನಂತರ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಸಿದ್ದರಾಮಯ್ಯ ಅವರು ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ತಮ್ಮ ಪಕ್ಷದ ಅಲ್ಪಸಂಖ್ಯಾತ ಅಭ್ಯರ್ಥಿ ಮನ್ಸೂರ್ ಖಾನ್ ಅವರ ಸೋಲಿಗೂ ಕಾರಣರಾಗಿದ್ದಾರೆ. ಜತೆಗೆ, ಮನಸಿನಲ್ಲಿ ನಂಜು ತುಂಬಿಕೊಂಡು ಜೆಡಿಎಸ್ ಅಭ್ಯರ್ಥಿ ಪರಾಜಯಕ್ಕೂ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *