Breaking News

ಅಡ್ಡ ಮತದಾನ : ಬಿಜೆಪಿ ಶೋಭಾರಾಣಿ ಕುಶ್ವಾಹ್ ಅಮಾನತು


ಜೈಪುರ: ರಾಜಸ್ಥಾನ ವಿಧಾನಸಭೆಯಲ್ಲಿ ಧೋಲಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಬಿಜೆಪಿಯ ಶೋಭಾರಾಣಿ ಕುಶ್ವಾಹ್ ಅವರನ್ನು ಪಕ್ಷ ಅಮಾನತು ಮಾಡಿದೆ ಹಾಗೂ ಅಡ್ಡ ಮತದಾನಕ್ಕೆ ಕಾರಣ ಕೇಳಿ ನೋಟಿಸ್ ನೀಡಿದೆ ಎಂದು  ವರದಿ ಮಾಡಿದೆ.

ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಚ್ಚರಿ ಎಂಬಂತೆ ಶೋಭಾರಾಣಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿದ್ದರು ಎನ್ನಲಾಗಿದ್ದು, ಶಾಸಕಿ ಇದೀಗ ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾಗುವ ಎಲ್ಲ ಸಾಧ್ಯತೆ ಇದೆ. ಐದು ವರ್ಷದ ಹಿಂದೆ ಇವರ ಪತಿಯ ಶಾಸಕತ್ವವನ್ನು ರದ್ದುಪಡಿಸಿ ಜೈಲಿಗೆ ಕಳುಹಿಸಲಾಗಿತ್ತು. ಈ ಕಾರಣದಿಂದ ಶೋಭಾರಾಣಿ ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಇದೀಗ ಶಾಸಕಿಯ ಅಡ್ಡಮತದಾನವನ್ನು ಪತಿಯ ಜೈಲು ಶಿಕ್ಷೆ ಜತೆ ಸಂಪರ್ಕ ಕಲ್ಪಿಸಲಾಗಿದ್ದು, ಇದುವರೆಗೂ ಪಕ್ಷ ನೀಡಿದ ನೋಟಿಸ್‍ಗೆ ಅವರು ವಿವರಣೆ ನೀಡಿಲ್ಲ ಎಂದು ವರದಿಯಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *