Breaking News

ಚುನಾವಣೆಯಲ್ಲಿ ನಮ್ಮ ಗೆಲವು ನಿಶ್ಚಿತ : ಬೊಮ್ಮಾಯಿ


ಹುಬ್ಬಳ್ಳಿ : ನಾಲ್ಕು ಪರಿಷತ್ ಚುನಾವಣೆಯಲ್ಲಿ ನಮ್ಮ ಗೆಲವು ನಿಶ್ಚಿತ.‌ದೇಶದಲ್ಲಿ ವಿವಿಧೆಡೆ ನಡೆಯುತ್ತಿರುವ ಹಿಂಸಾಚಾರ ಹಿನ್ನೆಲೆ‌ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ನಿನ್ನೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ವಹಿಸಲು‌ ಸೂಚಿಸಲಾಗಿದೆ. ಆಯಾ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಸೌಹಾರ್ದತೆ ಕಾಪಾಡಬೇಕೆಂದು‌ ತಿಳಿಸಲಾಗಿದೆ.‌‌ ಈ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಜತೆಗೆ ಚರ್ಚೆ ಮಾಡಿದ್ದೇನೆ. ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್‌ ದಾಳಿ ನಡೆದಿರುವುದು ದುರದೃಷ್ಟಕರವಾಗಿದೆ. ಅಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕೈಗೊಳ್ಳಲು ಚಿಂತಿಸಲಾಗಿದೆ.ಉತ್ತರ ಪ್ರದೇಶದಂತ ಘಟನೆಗಳು ನಮ್ಮಲ್ಲಿ ನಡೆದಿಲ್ಲ. ನಮ್ಮ ರಾಜ್ಯ ಶಾಂತವಾಗಿದೆ. ಶೂಟ್ ಆ್ಯಟ್ ಸೈಟ್ ಕ್ರಮದ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ರಾಯಚೂರು ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ ಪ್ರಕರಣ ಬಗ್ಗೆ ಈಗಾಗಲೇ ತನಿಖೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನ ಅಮಾನತು ಮಾಡಲಾಗಿದೆ ಎಂದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *