Breaking News

ರೈತರಿಗೆ ಹವಾಮಾನ ಇಲಾಖೆಯಿಂದ ಶುಭ ಸುದ್ದಿ


ರಾಜ್ಯದಲ್ಲಿ ನಿಗದಿತ ದಿನಾಂಕ ಕಳೆದರೂ ಸಹ ಮಳೆಯಾಗದ ಕಾರಣ ಆತಂಕದಲ್ಲಿದ್ದರು. ಇದೀಗ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದೆ.

ಇಂದಿನಿಂದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಯನ್ನು ನೀಡಲಾಗಿದೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶನಿವಾರದಿಂದಲೇ ಮಳೆ ಬಿರುಸಿನಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಬೆಳಗಾವಿ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *