Breaking News

ಕೋವಿಡ್ ಏರಿಕೆ : ಸರ್ಕಾರ ಹೊಸದಾಗಿ ಮಾರ್ಗಸೂಚಿ ಹೊರಡಿಕೆ


ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೊಸದಾಗಿ ಮಾರ್ಗಸೂಚಿ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿ ಆದೇಶಿಸಿದೆ.

ಸ್ವಂತ ವಾಹನ ಹಾಗೂ ಸಾರ್ವಜನಿಕ ಸಾರಿಗೆ ಬಸ್, ರೈಲು, ಮೆಟ್ರೋ ರೈಲುಗಳಲ್ಲಿ ಸಂಚರಿಸುವಾಗ ಮುಖಗವಸು ಧರಿಸುವುದು ಕಡ್ಡಾಯವಾಗಿದೆ. ಈಗಾಗಲೇ ಎರಡು ಡೋಸ್ ಲಸಿಕೆ ಪಡೆದು, ಮೂರನೇ ಡೋಸ್ ಪಡೆಯಲು ಅರ್ಹರಾಗಿರುವವರು ಕೂಡಲೇ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಳ್ಳುವಂತೆ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದೆ.

ಈ ಮಧ್ಯೆ, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮ ಹಂತದಲ್ಲಿ ಪರಿಶೀಲಿಸಲಾಗುತ್ತಿದ್ದು, ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಹಂತದಲ್ಲಿ ಸೂಕ್ತ ಪರಿಶೀಲನೆ ಕೈಗೊಳ್ಳಲಾಗುತ್ತಿದ್ದು, ಹಿಂದಿನ ಅನುಭವದ ಆಧಾರದ ಮೇಲೆ ಪರಿಸ್ಥಿತಿಯನ್ನು ಪ್ರಾರಂಭದಲ್ಲಿಯೇ ನಿಯಂತ್ರಿಸುವ ವಿಶ್ವಾಸವಿದೆ ಎಂದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *