ಬೆಳಗಾವಿ: : 15 ಸಾವಿರ ಶಿಕ್ಷಕರನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ಕಾಲೇಜಿನಲ್ಲಿ 6 ಸಾವಿರ ಸ್ಮಾರ್ಟ್ ಕ್ಲಾಸ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ನಡೆದ ವಾಯವ್ಯ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಏಳು ಸಾವಿರ ಶಾಲಾ ಕೊಠಡಿಗಳನ್ನು ಗ್ರಾಮೀಣ ಭಾಗದಲ್ಲಿ ಕಟ್ಟಲು ಅನುದಾನ ನೀಡಿ, ಇದೇ ವರ್ಷದಲ್ಲಿ ಪೂರ್ತಿಗೊಳಿಸಲು ಸೂಚಿಸ ಲಾಗಿದೆ.ಏಳು ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸಲಾಗುವುದು. ಜತೆಗೆ ವಿದೇಶದ ವಿವಿಯೊಂದಿಗೆ ಒಡಂಬಡಿಕೆ ಮಾಡಲಾಗುವುದು. ಆರ್ ಆಯಂಡ್ ಡಿ ನೀತಿ ಮಾಡಲಾಗುತ್ತಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

