Breaking News

ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಕಲ ಸಿದ್ಧತೆ- ಮತಕೇಂದ್ರಗಳಿಗೆ ಡಿಸಿ ಭೇಟಿ

ಹುಬ್ಬಳ್ಳಿ; ಭಾರೀ ಕದನ ಕುತೂಹಲಕ್ಕೆ ಕಾರಣವಾಗಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ನಾಳೆ ಜೂನ್ 13 ರಂದು ಮತದಾನ ನಡೆಯಲಿದ್ದು . ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದೆ‌. ನಗರದ ವಿವಿಧ ಮತಕೇಂದ್ರಗಳಿಗೆ ಪೂರ್ವ ತಯಾರಿ ಕುರಿತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ ಪರಿಶೀಲನೆ ಮಾಡಿದರು. ಈ ಕುರಿತು ಡಿಟೇಲ್ಸ್ ಇದೆ ನೋಡಿ.

ಹುಬ್ಬಳ್ಳಿ ಧಾರವಾಡ ಸೇರಿದಂತೆ ಜಿಲ್ಲೆಯಲ್ಲಿ 21 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಜಿಲ್ಲೆಯಲ್ಲಿ 6445 ಒಟ್ಟು ಮತದಾರರಿದ್ದಾರೆ. ಅವರಲ್ಲಿ 3450 ಪುರುಷ ಹಾಗೂ 2995 ಮಹಿಳಾ ಮತದಾರರಾಗಿದ್ದಾರೆ. ಜಿಲ್ಲೆಯ ಮತಗಟ್ಟೆಗಳ ಸಂಖ್ಯೆ, ಸ್ಥಳ ಮಾಹಿತಿ ಇಲ್ಲಿದೆ ನೋಡಿ.ಧಾರವಾಡ ನಗರ, ಧಾರವಾಡ ಗ್ರಾಮಾಂತರ, ಹುಬ್ಬಳ್ಳಿ ಶಹರ, ಹುಬ್ಬಳ್ಳಿ ಗ್ರಾಮಾಂತರ ‌ನವಲಗುಂದ,‌ಕಲಘಟಗಿ, ಕುಂದಗೋಳ, ನವಲಗುಂದ, ಅಳ್ನಾವರ, ಅಣ್ಣಿಗೇರಿಗಳಲ್ಲಿ ಮತಕೇಂದ್ರ ಸ್ಥಾಪನೆ ಮಾಡಲಾಗಿದೆ.‌ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಕೇಂದ್ರಗಳಿಲ್ಲಿ ನಿಗಾ ಇರಿಸಲಾಗಿದೆ ಎಂದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *