Breaking News

ನೂಪುರ್ ಶರ್ಮಾ ಪ್ರಕರಣ : 3 ಜನ ಬಂಧನ


ಬೆಳಗಾವಿ: ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅವರ ಪ್ರತಿಕೃತಿಯನ್ನು ಗಲ್ಲಿಗೇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗಡಿ ಜಿಲ್ಲೆ ಬೆಳಗಾವಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಪ್ರಕರಣದ ಮೂವರು ಆರೋಪಿಗಳಾದ ಮೊಹಮ್ಮದ್ ಶೋಯಬ್, ಅಮನ್ ಮೊಕಾಶಿ, ಅರ್ಬಾಜ್ ಮೊಕಾಶಿಯನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರ ಮುಸ್ಲೀಂ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದರು. ಈ ವೇಳೆ ನೂಪುರ್ ಶರ್ಮಾ ಪ್ರತಿಕೃತಿಗೆ ಸೀರೆ ಉಡಿಸಿ, ಭಾವಜಿತ್ರವನ್ನು ಅಂಟಿಸಿ ಅದನ್ನು ಗಲ್ಲಿಗೇರಿಸಿದ್ದರು. ಬೆಳಗಾವಿಯ ಪೋರ್ಟ್ ರಸ್ತೆಯಲ್ಲಿ ಈ ಘಟನೆ ನಡೆದಿತ್ತು.

ಮಾರ್ಕೆಟ್ ಠಾಣಾ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಇದೀಗ ಪ್ರಕರಣ ಸಂಬಂಧ ಮೂವರನ್ನು ಬಂಧಿಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *