ಹುಬ್ಬಳ್ಳಿ: ಶಿಕ್ಷಕರೊಬ್ಬರು ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರ ಭಾವಚಿತ್ರದ ಬ್ಯಾಡ್ಜ್ ಧರಿಸಿ, ಇಲ್ಲಿನ ದೇಶಪಾಂಡೆ ನಗರದ ಎನ್.ಆರ್. ದೇಸಾಯಿ ರೋಟರಿ ಶಾಲೆಯ ಮತಗಟ್ಟೆಗೆ ಭೇಟಿ ನೀಡುವ ಮೂಲಕ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದರು.
ಈ ಪೈಕಿ, ನಗರದ ಸಿದ್ದರಾಮೇಶ್ವರ ಪ್ರೌಢಶಾಲೆಯ ಶಶಿಧರ ಗಾಜಿ ಅವರು ಬ್ಯಾಡ್ಜ್ ಧರಿಸಿದ್ದರು. ಈ ಕುರಿತು, ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಚುನಾವಣಾ ಅಧಿಕಾರಿಗಳು ಮತಗಟ್ಟೆಗಳ ಬಳಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮತಗಟ್ಟೆ ಸುತ್ತಮುತ್ತ ಮಾಡಬೇಕು. ಘಟನೆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

