Breaking News

ಹುಬ್ಬಳ್ಳಿ ಗಲಭೆ ಕುರಿತು ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕೋರ್ಟ್‌


ಧಾರವಾಡ : ಕಳೆದ ಏಪ್ರಿಲ್ 16 ರಂದು ಅಭಿಷೇಕ್ ಎಂಬ ಯುವಕ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ .  ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ 12 ಎಫ್ ಐಆರ್ ಗಳಲ್ಲಿ 11 ಎಫ್ ಐಆರ್ ರದ್ದು ಗೊಳಿಸಬೇಕು ಎಂದು ಆರೋಪಿಗಳ ಪರ ಧಾರವಾಡ ಹೈಕೋರ್ಟ್‌ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ .

ಗಲಭೆ ನಡೆದು , ಗುಂಪೊಂದು ಹಳೇ ಹುಬ್ಬಳ್ಳಿ ಠಾಣೆ ಎದುರು ಪೊಲೀಸರ ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು . ಈ ಹಿನ್ನೆಲೆ 156 ಜನರನ್ನು ಬಂಧಿಸಿದ್ದರು . ಇನ್ನು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ , ಪ್ರಕರಣದ ತನಿಖೆ ನಡೆಯುತ್ತಿದ್ದು , ನ್ಯಾಯಾಲಯಕ್ಕೆ ಚಾರ್ಜೀಟ್ ಸಲ್ಲಿಕೆ ಆಗಬೇಕಿದೆ , ಈ ಹಿನ್ನೆಲೆ ಎಫ್ ಐಆರ್ ರದ್ದು ಮಾಡಲು ಆಗಲ್ಲ ಎಂದು ಕೋರ್ಟ್ ಹೇಳಿದೆ .

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *