ಆಂಧ್ರಪ್ರದೇಶ : ಬಸ್ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದಿದೆ. ಒಡಿಶಾದ ಚಿನ್ನಪಲ್ಲಿಯಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್‌ಗೆ ಸೇರಿದ ಬಸ್, ಚಿಂತೂರು ವಲಯದ ಎಡುಗುರಲ್ಲಪಲ್ಲಿ ಎಂಬಲ್ಲಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಮೃತರನ್ನು ಧನೇಶ್ವರ ದಳಪತಿ (24), ಜೀತು ಹರಿಜನ್ (5), ಸುನೆನ್ ಹರಿಜನ್ (2), ದಾಮೋದರ್ (45) ಮತ್ತು ಮಹಿ (4) ಎಂದು ಗುರುತಿಸಲಾಗಿದೆ.
ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಅಪಘಾತದ ಸಮಯದಲ್ಲಿ ಬಸ್‌ನಲ್ಲಿ 60 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

