Breaking News

ನಿಲ್ಲಿಸಿದ್ದ ಬಸ್‌ನಿಂದ ಹಣ ಕಳವು : ವಿಡಿಯೋ ವೈರಲ್‌


ಮಂಗಳೂರು : ನಿಲ್ಲಿಸಿದ್ದ ಬಸ್‌ನಿಂದ ಹಣ ಕಳವು ಮಾಡಲಾಗಿದೆ ಎನ್ನಲಾದ ಸಿಸಿ ಕೆಮರಾ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಉಪ್ಪಿನಂಗಡಿ-ಸ್ಟೇಟ್‌ಬ್ಯಾಂಕ್‌ ನಡುವೆ ಸಂಚರಿಸುವ ಖಾಸಗಿ ಬಸ್‌ನ್ನು ಸ್ಟೇಟ್‌ಬ್ಯಾಂಕ್‌ನಲ್ಲಿ ನಿಲ್ಲಿಸಿದ ಬಳಿಕ ಚಾಲಕ ಮತ್ತು ನಿರ್ವಾಹಕ ಊಟಕ್ಕೆಂದು ತೆರಳಿದ್ದು ಈ ಸಂದರ್ಭ ಬಸ್‌ನೊಳಗೆ ಪ್ರವೇಶಿಸಿದ ಓರ್ವ ಬಸ್‌ನಲ್ಲಿದ್ದ ಹಣ ಕಳವು ಮಾಡಿದ್ದಾನೆನ್ನಲಾಗಿದೆ. ಈ ವೇಳೆ ಬಸ್‌ನಲ್ಲಿ ಬೇರೆ ಯಾರೂ ಇರಲಿಲ್ಲ. ಕಳವು ಮಾಡಲಾಗಿದೆ ಎನ್ನಲಾದ ದೃಶ್ಯ ಬಸ್‌ನಲ್ಲಿದ್ದ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಬಸ್‌ ನಿರ್ವಾಹಕ ಬ್ಯಾಗ್‌ನಲ್ಲಿ ಸಂಗ್ರಹಿಸಿಟ್ಟಿದ್ದ ಹಣವನ್ನು ಕಳ್ಳ ದೋಚಿದ್ದಾನೆನ್ನಲಾಗಿದೆ. ಈ ಬಗ್ಗೆ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *