ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಒಂದು ಕಡೆ ಸಂಸದ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರೆ, ದೇಶದ ಹಲವೆಡೆ ಕಾಂಗ್ರೆಸ್ ನಾಯಕರು ಇಡಿ ಅಧಿಕಾರಿಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯ ವೇಳೆ ಪೊಲೀಸರು ತಳ್ಳಿದ ನಂತರ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ನಾಯಕ ಪಿ. ಚಿದಂಬರಂ ಎಡ ಪಕ್ಕೆಲುಬು ಮೂಳೆ ಮುರಿತಕ್ಕೆ ಒಳಗಾಗಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಟ್ವಿಟರ್‌ನಲ್ಲಿ ವಿಡಿಯೋ ಹೇಳಿಕೆಯಲ್ಲಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಅನಾಗರಿಕತೆಯ ಎಲ್ಲಾ ಮಿತಿಗಳನ್ನು ದಾಟಿದೆ ಎಂದು ಆರೋಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

