Breaking News

ತಮಿಳುನಾಡು ಸಿಎಂ ಪ್ರಧಾನಿಗೆ ಬರೆದಿರುವ ಪತ್ರಕ್ಕೆ ಬೊಮ್ಮಾಯಿ ತಿರುಗೇಟು


ಬೆಂಗಳೂರು- ಮೇಕೆದಾಟು ಕುಡಿಯುವ ನದಿನೀರು ಯೋಜನೆ ಸಂಬಂಧ ಇದೇ 17ರಂದು ಕರೆದಿರುವ ಸಭೆಯನ್ನು ನಡೆಸದಂತೆ ತಮಿಳುನಾಡು ಸಿಎಂ ಪ್ರಧಾನಿಗೆ ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಇದು ಒಕ್ಕೂಟ ವ್ಯವಸ್ಥೆಯ ಮೇಲೆ ತಮಿಳುನಾಡು ಸರ್ಕಾರ ದಬ್ಬಾಳಿಕೆ ನಡೆಸಲು ಹೊರಟಿದೆ. ನಮ್ಮ ಪಾಲಿನ ನೀರನ್ನು ಬಳಸಿಕೊಂಡರೆ ಇವರಿಗೇನು? ಸಮಸ್ಯೆ ಎಂದು ಖಾರವಾಗಿ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪ್ರಧಾನಿ ನರೇಂದ್ರಮೋದಿಗೆ ಮೇಕೆದಾಟು ಯೋಜನೆ ಸಭೆಯನ್ನು ನಡೆಸದಂತೆ ಪತ್ರ ಬರೆದಿರುವುದು ಸರಿಯಲ್ಲ. ಇದಕ್ಕೆ ಕಾನೂನಿನಲ್ಲಿ ಯಾವುದೇ ಬೆಲೆಯೂ ಇಲ್ಲ ಎಂದು ತಿರುಗೇಟು ಕೊಟ್ಟರು. ನಾವು ನಮ್ಮ ಪಾಲಿನ ನೀರು ಬಳಸಿಕೊಂಡು ಕುಡಿಯುವ ನೀರಿನ ಯೋಜನೆಯನ್ನು ಪ್ರಾರಂಭಿಸುತ್ತಿದ್ದೇವೆ. ಈ ಹಿಂದೆ 15 ಸಭೆಗಳು ನಡೆದಾಗ ತಮಿಳುನಾಡು ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಅಂದು ವಿರೋಧವನ್ನೇ ವ್ಯಕ್ತಪಡಿಸದೇ ಇರುವಾಗ ಈಗೇಕೆ ತಕರಾರು ಎಂದು ಸಿಎಂ ಪ್ರಶ್ನಿಸಿದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *