ಬೆಂಗಳೂರು : ಕೊರೋನಾ ಸೊಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ, ಅದರಲ್ಲೂ ನಗರದ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.
ದಾಸರಹಳ್ಳಿಯ ಎರಡು ಖಾಸಗಿ ಶಾಲೆಗಳ ಮಕ್ಕಳಿಗೆ ಕೊರೋನಾ ವಕ್ಕರಿಸಿದೆ. 4 ಮತ್ತು 5 ತರಗತಿಯ ಒಟ್ಟು 21 ಮಕ್ಕಳಿಗೆ 6ನೇ ತರಗತಿಯ 10 ಮಕ್ಕಳಿಗೆ ಕೊರೊನಾ ಕಾಣಿಸಿಕೊಂಡಿದೆ. 31 ವಿದ್ಯಾರ್ಥಿಗಳಿಗೆ ಪಾಸಿಟಿವ್ ಎರಡು ಶಾಲೆಗ ಶಿಕ್ಷಕರನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆ ಶಾಲೆಗಳಿಗೆ ರಜೆ ಘೋಷಣೆ
ಮಾಡಲಾಗಿದೆ. ಇನ್ನು ಈ ಬಗ್ಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಪ್ರತಿಕ್ರಿಯಿಸಿದ್ದು, ಮಕ್ಕಳಿಗೆ ಸೋಂಕು ಬಂದು ಕೂಡಲೇ ಏನು ಆಗೊಲ್ಲ. 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಎಷ್ಟು ಲಸಿಕೆ ಆಗಿದೆ ಮಾಹಿತಿ ಪಡೆಯುತ್ತಿದ್ದೇವೆ. 15 ವರ್ಷ ಮೇಲ್ಪಟ್ಟರಿಗೂ ಲಸಿಕೆ ಆಗ್ತಿದೆ. ಸೋಂಕು ಬಂದ ಕೂಡಲೇ ಶಾಲೆ ಕ್ಲೋಸ್ ಮಾಡಬೇಕು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

