Breaking News

ಪರೋಕ್ಷವಾಗಿ ಪ್ರಧಾನಿಗೆ ಟಾಂಗ್ ಕೊಟ್ಟ ವರುಣ್ ಗಾಂಧಿ


ದೇಶದಲ್ಲಿ 1 ಕೋಟಿ ಹುದ್ದೆಗಳು ಖಾಲಿ ಇವೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿಕೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ 18 ತಿಂಗಳಲ್ಲಿ 10 ಲಕ್ಷ ಹುದ್ದೆ ನೇಮಕಾತಿ ಸೂಚನೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಮಂಗಳವಾರ ಬೆಳಿಗ್ಗೆ ಪ್ರಧಾನಿ ಟ್ವೀಟ್ ಮಾಡಿ 10 ಲಕ್ಷ ಹುದ್ದೆ ಸೃಷ್ಟಿಗೆ ಆದೇಶ ನೀಡಲಾಗಿದೆ ಎಂದು ಹೇಳಿಕೊಂಡಿದ್ದರು. ಕಳೆದ ಕೆಲವು ಸಮಯದಿಂದ ತಮ್ಮದೇ ಪಕ್ಷದ ನೀತಿಗಳನ್ನು ಬಹಿರಂಗವಾಗಿ ಖಂಡಿಸುತ್ತಿರುವ ಸಂಸದ ವರುಣ್ ಗಾಂಧಿ, ಟ್ವೀಟ್ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ್ದಾರೆ. ವರುಣ್ ಗಾಂಧಿ ಟ್ವೀಟ್ ಮಾಡಿ, ಧನ್ಯವಾದಗಳು ಪ್ರಧಾನಿ ಮೋದಿ ಅವರೇ, ಯುವ ಸಮುದಾಯದ ನೋವು ಹಾಗೂ ಭಾವನೆಯನ್ನು ಅರ್ಥ ಮಾಡಿಕೊಂಡು ಉದ್ಯೋಗ ಸೃಷ್ಟಿ ಮಾಡುತ್ತಿದ್ದೀರಿ. ನಾವು ಖಾಲಿ ಇರುವ 1 ಕೋಟಿ ಉದ್ಯೋಗ ಸೃಷ್ಟಿ ಮಾಡಿದರೆ ಇದಕ್ಕೊಂದು ಅರ್ಥ ಬರುತ್ತದೆ. ಇದರಿಂದ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂಬ ನೀವು ನೀಡಿದ ಭರವಸೆ ಈಡೇರಿಸಲು ಒಂದು ಹೆಜ್ಜೆ ಇಟ್ಟಂತಾಗುತ್ತದೆ ಎಂದು ಹೇಳಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *