ಬೆಂಗಳೂರು: ಹಾಲಿ ಉಪ ಉಪಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ರಾಜ್ಯದ ನೂತನ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ.ಈ ಬಗ್ಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಲೋಕಾಯುಕ್ತರಾಗಿದ್ದ ನ್ಯಾ. ಪಿ.ವಿಶ್ವನಾಥ್ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಸುಮಾರು 5 ತಿಂಗಳುಗಳ ಕಾಲ ಈ ಹುದ್ದೆ ಖಾಲಿ ಇತ್ತು. ಇದೀಗ ಈ ಹುದ್ದೆಗೆ 2019ರ ನವೆಂಬರ್‍ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್.ಪಾಟೀಲ್‍ರನ್ನು ನೇಮಕ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

