Breaking News

777 ಚಾರ್ಲಿ ಚಿತ್ರ ವಿಕ್ಷೀಸಿ ಭಾವುಕರಾದ ಸಿಎಂ



ಬೆಂಗಳೂರು : ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ‘ ಸನ್ನಿ’ ಯನ್ನು ನೆನಪಿಸಿಕೊಂಡು ಭಾವುಕರಾದರು.

ಮನುಷ್ಯ ಮತ್ತು ನಾಯಿಯ ನಡುವಿನ ಪ್ರೀತಿ, ಯಾವುದೇ ಕಟ್ಟುಪಾಡಿಲ್ಲದ  ಪ್ರೀತಿಗೆ ಉತ್ತಮ ಉದಾಹರಣೆ. ಅತ್ಯಂತ ಪರಿಶುದ್ಧ ಪ್ರೀತಿ ಇದು ಎಂದು ಮುಖ್ಯಮಂತ್ರಿಗಳು ಗದ್ಗದಿತರಾಗಿ ನುಡಿದರು. ನಾಯಕನಟ ರಕ್ಷಿತ ಶೆಟ್ಟಿ ಮನೋಜ್ಞ ವಾಗಿ ನಟಿಸಿದ್ದಾರೆ ಎಂದು ಹೇಳಿದ ಅವರು, ಈಗ ನಾನು ಮನೆಯಲ್ಲಿ ಹೆಣ್ಣುನಾಯಿ ಟಿಯಾ’ಳನ್ನು ಸಾಕುತ್ತಿರುವುದಾಗಿ ಅವರು ತಿಳಿಸಿದರು. ಈ ಸಿನಿಮಾ ನೋಡಲು ಜನರ ದಟ್ಟಣೆ ನೋಡಿದಾಗ ಪ್ರಾಣಿ ಮತ್ತು ಮನುಷ್ಯ ನ ಸಂಬಂಧ ವಿರುವ ಚಿತ್ರ ನೋಡಬೇಕು ಎಂದೆನಿಸಿತ್ತು. ರಕ್ಷಿತ್ ಅವರೂ ಚಿತ್ರ ವೀಕ್ಷಿಸಬೇಕೆಂದು ಕರೆದಿದ್ದರು. ಹಾಗಾಗಿ ಚಿತ್ರ ನೋಡಿದಂತಾಯಿತು ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *