Breaking News

ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದು ಮಹಿಳೆ ಸಾವು


ಮಂಗಳೂರು: ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಅಡುಗೆ ಸಹಾಯಕಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ.ಅಗ್ನೇಸ್ ಪ್ರಮೀಳಾ ಡಿಸೋಜಾ (37) ಮೃತ ದುರ್ದೈವಿ.

ಪುತ್ತೂರಿನ ವಿಕ್ಟರ್ಸ್ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿದ್ದ ಪ್ರಮೀಳಾ ಮೇ 30ರಂದು ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಕಾಲು ಜಾರಿ ಸಂಬಾರು ಪಾತ್ರೆಗೆ ಬಿದ್ದಿದ್ದರು.ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪುತ್ತೂರು ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *