ಬೆಂಗಳೂರು: ‘ದೆಹಲಿಯ ಎಐಸಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದು ಸರ್ವಾಧಿಕಾರಿ ವರ್ತನೆ. ಬಿಜೆಪಿಯವರಿಗೆ ಅಧಿಕಾರದ ಮದ ಏರಿದೆ. ಹೀಗಾಗಿ ಇಂತಹದ್ದೆಲ್ಲಾ ಮಾಡಿಸುತ್ತಿದ್ದಾರೆ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯವರು ಈ ಹಿಂದೆ ಮುಚ್ಚಿ ಹೋಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮತ್ತೆ ಕೆದಕಿ ತನಿಖೆ ನಡೆಸುವ ಮೂಲಕ ದ್ವೇಷದ ಹಾಗೂ ದುರುದ್ದೇಶದ ರಾಜಕಾರಣ ಮಾಡುತ್ತಿದ್ದಾರೆ. ವಿನಾಕಾರಣ ಇಂತಹ ದ್ವೇಷದ ರಾಜಕಾರಣ ಮಾಡುವವರ ವಿರುದ್ಧ ಪ್ರತಿಭಟನೆ ಮಾಡಬೇಕು ತಾನೆ? ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಲು ಎಐಸಿಸಿ ಕಚೇರಿಗೆ ಹೋದರೆ ಬಂಧಿಸಿದ್ದಾರೆ. ಬಂಧನದ ವೇಳೆ ಕೆಲವರ ಮೇಲೆ ಹಲ್ಲೆ ಮಾಡಿದ್ದಾರೆ. ಇದು ಸರ್ವಾಧಿಕಾರಿ ಧೋರಣೆ. ಬಿಜೆಪಿಯವರು ಅಧಿಕಾರದ ಮದದಲ್ಲಿ ಹೀಗೆಲ್ಲಾ ಮಾಡಿಸುತ್ತಿದ್ದಾರೆ. ಈಗ ದೇಶದಲ್ಲಿ ಪ್ರತಿಭಟನೆಯನ್ನೂ ನಡೆಸಬಾರದು ಎನ್ನಲು ತುರ್ತು ಪರಿಸ್ಥಿತಿ ಏನಾದ್ರೂ ಇದೆಯಾ?’ ಎಂದು ಪ್ರಶ್ನಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

