Breaking News

ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ನಾಳೆ ರಾಜಭವನಕ್ಕೆ ಮುತ್ತಿಗೆ


ಬೆಂಗಳೂರು: ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಭಾರೀ ಪ್ರತಿಭಟನೆಗಿಳಿದಿರೋ ರಾಜ್ಯ ಕಾಂಗ್ರೆಸ್ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಸಿದ್ಧವಾಗ್ತಿದೆ. ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ನಾಳೆ ರಾಜಭವನಕ್ಕೆ ಮುತ್ತಿಗೆ ಹಾಕಲಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳ್ತೇವೆ.ಅಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕ್ತೇವೆ.ನಾಡಿದ್ದು ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಮಾಡ್ತೇವೆ. ಮೇಕೆದಾಟು ಯೋಜನೆಗೆ ನಾವು ಧರಣಿ ಮಾಡಿದ್ದೆವು.ನಮ್ಮ‌ ಮೇಲೆ ಕೇಸ್ ಹಾಕಿದ್ದರು. ಇಂದು ಜಾಮೀನು ಪಡೆದುಕೊಂಡಿದ್ದೇವೆ. ನಾಳೆ ಮತ್ತೆ ಹೋರಾಟಕ್ಕೆ ಇಳಿಯುತ್ತೇವೆ ಎಂದು ಹೇಳಿದರು. ಬಿಜೆಪಿಯ ನಡೆಯನ್ನು ನಾವು ಪ್ರತಿಭಟನೆ ಮೂಲಕ ವಿರೋಧಿಸುತ್ತೇವೆ. ಸಂವಿಧಾನದವನ್ನು ಗಾಳಿಗೆ ತೂರಿ ಎಲ್ಲಾ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸುವ ಪ್ರಯತ್ನಗಳು ನಡೆಯುತ್ತಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *