ತುಮಕೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸುವುದು ಖಚಿತ. ಆದರೆ ಕ್ಷೇತ್ರ ಯಾವುದೆಂದು ನಿರ್ಧಾರವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಗುಬ್ಬಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬುದರ ಬಗ್ಗೆ ಖಚಿತತೆ ಇಲ್ಲ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಪ್ರಾರಂಭವಾಗಿದ್ದು ಮುಂಬರುವ ಚುನಾವಣೆಯಲ್ಲಿ 140 ಕ್ಷೇತ್ರಗಳನ್ನು ಗೆದ್ದು, ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂಬುದು ನಮ್ಮ ದೃಷ್ಟಿ. ಆ ದೃಷ್ಟಿಯಿಂದ ರಾಜ್ಯಪ್ರವಾಸ ಪ್ರಾರಂಭವಾಗಿದೆ ಎಂದರು. ವಾರಕ್ಕೊಂದು ಜಿಲ್ಲೆಗೆ ತೆರಳಿ ಕಾರ್ಯಕರ್ತರ ಜೊತೆಗೆ ಸಮಾಲೋಚನೆ ಮಾಡುವುದಾಗಿ ತಿಳಿಸಿದ ಅವರು ಎಲ್ಲಾ ವರ್ಗದ ಜನರನ್ನು ನಮ್ಮ ಜೊತೆಗೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





